ADVERTISEMENT

ಚಿತ್ತಾಪುರ: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 3:17 IST
Last Updated 19 ಅಕ್ಟೋಬರ್ 2025, 3:17 IST
<div class="paragraphs"><p>ಆರ್‌ಎಸ್‌ಎಸ್ ಪಥ ಸಂಚಲನ</p></div>

ಆರ್‌ಎಸ್‌ಎಸ್ ಪಥ ಸಂಚಲನ

   

(ಸಾಂದರ್ಭಿಕ ಚಿತ್ರ)

ಚಿತ್ತಾಪುರ (ಕಲಬುರಗಿ ಜಿಲ್ಲೆ): ರಾಷ್ಟೀಯ ಸ್ವಯಂ ಸೇವಕ ಸಂಘದಿಂದ ಇಂದು ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 6.30 ರವರೆಗೆ ಆಯೋಜನೆ ಮಾಡಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿ ಶನಿವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್ ಎಸ್ ಎಸ್ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಪತ್ರ ಬರೆದಿರುವ ತಹಶೀಲ್ದಾರ್ ಅವರು, ಪಥ ಸಂಚಲನ ನಡೆಸುವ ಭಾನುವಾರ ದಿವಸವೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಹೀಗಾಗಿ ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೋರಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವ ಇದೆ. ಅನುಮತಿ ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.

ಪಥಸಂಚಲನ ನಡೆಸುವ ಉದ್ದೇಶದಿಂದ ಅದ್ದೂರಿ ಸಿದ್ಧತೆ ಮಾಡಿಕೊಂಡಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದಲ್ಲಿ ಭಗವಾಧ್ವಜ, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಿದ್ದರು. ಅಳವಡಿಕೆಗೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳ ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಇದೀವ ತಹಶೀಲ್ದಾರ್ ಅವರು ಇಡೀ ಪಂಥ ಸಂಚಲನ ಕಾರ್ಯಕಮಕ್ಕೆ ಅನುಮತಿ ನಿರಾಕರಿಸಿದ್ದಾರೆ.

ಶನಿವಾರ ರಾತ್ರಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರು ಪಟ್ಟಣಕ್ಕೆ ಭೇಟಿ‌ ನೀಡಿ ಬಂದೋಬಸ್ತ್ ಪರಿಶೀಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.