ADVERTISEMENT

ಕಲಬುರಗಿ-ಬೆಂಗಳೂರು ಬಸ್‌ ಸೇವೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 15:54 IST
Last Updated 3 ಫೆಬ್ರುವರಿ 2024, 15:54 IST
<div class="paragraphs"><p>ಕಲಬುರಗಿಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಶನಿವಾರ ಕಲಬುರಗಿ–ಬೆಂಗಳೂರು ವೋಲ್ವೊ ಬಸ್‌ ಹಾಗೂ ಅಮೋಘವರ್ಷ ಬಸ್‌ ಸೇವೆಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು.</p></div>

ಕಲಬುರಗಿಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಶನಿವಾರ ಕಲಬುರಗಿ–ಬೆಂಗಳೂರು ವೋಲ್ವೊ ಬಸ್‌ ಹಾಗೂ ಅಮೋಘವರ್ಷ ಬಸ್‌ ಸೇವೆಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು.

   

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ-1 ವತಿಯಿಂದ ಶನಿವಾರ ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವೊಲ್ವೊ ಮಲ್ಟಿ ಎಕ್ಸಲ್ ಸ್ಲೀಪರ್ ವಾಹನ ಹಾಗೂ ಕಲಬುರಗಿ-ಮಂಗಳೂರು-ಕಲಬುರಗಿ ಮಾರ್ಗದಲ್ಲಿ ಅಮೋಘವರ್ಷ (ನಾನ್ ಎ.ಸಿ ಸ್ಲೀಪರ್) ವಾಹನಗಳ ಕಾರ್ಯಾಚರಣೆ ಆರಂಭವಾಗಿದೆ.

ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಶನಿವಾರ ಶಾಸಕ ಅಲ್ಲಮಪ್ರಭು ಪಾಟೀಲ ಈ ನೂತನ ಬಸ್‌ಗಳ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲಾಲ್ ಅಹಮದ್, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ವಿಭಾಗೀಯ ತಾಂತ್ರಿಕ ಶಿಲ್ಪಿ ನಾಗರಾಜ್ ವಾರದ, ಸಂಚಾರ ಅಧಿಕಾರಿ ಈಶ್ವರ್ ಹೊಸಮನಿ, ಘಟಕ ವ್ಯವಸ್ಥಾಪಕ ಅಶೋಕ್ ಕುಮಾರ್ ದೊಡ್ಮನಿ ಹಾಗೂ ಸಿಬ್ಬಂದಿ ಇದ್ದರು. 

ADVERTISEMENT

ಪ್ರಯಾಣಿಕರ ಬೇಡಿಕೆ ಮೇರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ ಸೇವೆ ಆರಂಭಿಸಲಾಗಿದೆ. ಪ್ರಯಾಣಿಕರು ಈ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಸಂಚರಿಸುವ ಬಸ್‌ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಸಂಜೆ 7.45 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರು ತಲುಪಲಿದೆ. ಈ ಬಸ್‌ ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 7.45ಕ್ಕೆ ಕಲಬುರಗಿಗೆ ಬರಲಿದೆ. ಈ ಬಸ್‌ ರಾಯಚೂರು, ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ತಲುಪಲಿದೆ.

ಕಲಬುರಗಿ-ಮಂಗಳೂರು-ಕಲಬುರಗಿ ಮಾರ್ಗದಲ್ಲಿ ಸಂಚರಿಸುವ ಬಸ್‌ ಕಲಬುರಗಿ ಬಸ್ ನಿಲ್ದಾಣದಿಂದ ಸಂಜೆ 4.30 ಗಂಟೆಗೆ ಬಿಟ್ಟು ಮರುದಿನ ಬೆಳಿಗ್ಗೆ 7 ಗಂಟೆಗೆ ಮಂಗಳೂರು ತಲುಪಿಲಿದೆ. ಈ ಬಸ್‌ ಮಂಗಳೂರು ಬಸ್ ನಿಲ್ದಾಣದಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಕಲಬುರಗಿಗೆ ಬರಲಿದೆ. ಈ ಬಸ್‌ ವಿಜಯಪುರ, ಹುಬ್ಬಳ್ಳಿ ಮಾರ್ಗವಾಗಿ ಮಂಗಳೂರಿಗೆ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.