ADVERTISEMENT

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಕಡಿಮೆಯಾಗುತ್ತಿದೆ- ಸದಾಶಿವ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 7:24 IST
Last Updated 15 ಜನವರಿ 2022, 7:24 IST
ಸೇಡಂ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು
ಸೇಡಂ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು   

ಸೇಡಂ: ‘ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಕಡಿಮೆಯಾಗುತ್ತಿದೆ. ಪಾಲಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು' ಎಂದು ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಶುಕ್ರವಾರ ನಡೆದ 14ನೇ ಸೇಡಂ ಉತ್ಸವದಲ್ಲಿ ಅವರು ಮಾತನಾಡಿದರು.

ಉತ್ಸವ ಸಮಿತಿ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಮಾತನಾಡಿ, ಮಕ್ಕಳಲ್ಲಿ‌ಪ್ರತಿಭೆ ಅನಾವರಣಕ್ಕೆ ವೇದಿಕೆ ಬೇಕಿದೆ. ಶಾಲೆಯಲ್ಲಿನ ಶಿಕ್ಷಣದ ಜೊತೆಗೆ ಮನೆಯಲ್ಲಿ ಮಕ್ಕಳ ಮೇಲೆ ಪಾಲಕರು ನಿಗಾವಹಿಸಬೇಕು' ಎಂದರು.

ADVERTISEMENT

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸೇಡಂ ಉತ್ಸವ ಸಮಿತಿ ಕಾರ್ಯದರ್ಶಿ ನಾಗೀಂದ್ರಪ್ಪ‌ಡೊಳ್ಳಾ, ನಾಗರಿಕ ಸಮಿತಿ ಅಧ್ಯಕ್ಷ ಬಸವರಾಜ ರೇವಗೊಂಡ, ಸೇಡಂ ಪರಿವಾರ ಸಮಿತಿ ಅಧ್ಯಕ್ಷ ಅನಂತಯ್ಯ ಮುಸ್ತಾಜರ್,ಪುರಸಭೆ ಅಧ್ಯಕ್ಷೆ ಚನ್ನಮ್ಮ ಪಾಟೀಲ ಇದ್ದರು. ನಾಗೀಂದ್ರಪ್ಪ ಡೊಳ್ಳಾ ಸ್ವಾಗತಿಸಿದರು. ಜಗದೀಶ ಕಡಬಗಾಂವನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.