ADVERTISEMENT

ಸೇಡಂ | ಬಾರದ ವೇತನ: ಗ್ರಂಥಾಲಯದಲ್ಲೇ ಮೇಲ್ವಿಚಾರಕಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 21:31 IST
Last Updated 13 ಅಕ್ಟೋಬರ್ 2025, 21:31 IST
ಭಾಗ್ಯವತಿ ಅಗ್ಗಿಮಠ
ಭಾಗ್ಯವತಿ ಅಗ್ಗಿಮಠ   

ಸೇಡಂ: ಮೂರು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ನೊಂದು ತಾಲ್ಲೂಕಿನ ಮಳಖೇಡ ಗ್ರಾಮದ ಗ್ರಂಥಾಲಯ ಮೇಲ್ವಿಚಾರಕಿ ಗ್ರಂಥಾಲಯದಲ್ಲೇ ಸೋಮವಾರ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಳಖೇಡ ಗ್ರಾಮದ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ (40) ಮೃತರು. ಅವರಿಗೆ ಪತಿ, ಒಬ್ಬ ಪುತ್ರಿ ಹಾಗೂ ಒಬ್ಬ ಪುತ್ರ ಇದ್ದಾರೆ.

‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ. ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ದಿಢೀರ್‌ ಪ್ರತಿಭಟನೆ: ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಸಂಬಂಧಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಗ್ರಂಥಾಲಯ ಎದುರು ಪ್ರತಿಭಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.