ADVERTISEMENT

ಕಲಬುರ್ಗಿ: ಶರಣಬಸವೇಶ್ವರ ಸಂಸ್ಥಾನದ ಬಸವರಾಜಪ್ಪ ಅಪ್ಪ ‌ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 10:49 IST
Last Updated 20 ಏಪ್ರಿಲ್ 2021, 10:49 IST
   

ಕಲಬುರ್ಗಿ: ಇಲ್ಲಿನ ಶರಣಬಸವೇಶ್ವರ ದಾಸೋಹ ‌ಮಹಾಸಂಸ್ಥಾನದ ಪೀಠಾಧಿಪತಿಯಾಗಿದ್ದ ದಿ.ದೊಡ್ಡಪ್ಪ ಅಪ್ಪ ಅವರ ಎರಡನೇ ಪುತ್ರ ಬಸವರಾಜಪ್ಪ ‌ಅಪ್ಪ (80) ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಇದೇ 17ರಂದು ಅವರ ಪತ್ನಿ ನಳಿನಿದೇವಿ ಅವರು ಇಹಲೋಕ ತ್ಯಜಿಸಿದ್ದರು.

ಅವರಿಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಗೌರವ ಅಧ್ಯಕ್ಷ ಹಾಗೂ ಸಮಾಜ ಸೇವಕ ಲಿಂಗರಾಜಪ್ಪ ಅಪ್ಪ ಸೇರಿದಂತೆ ಇಬ್ಬರು ಪುತ್ರರು, ಐವರು ಪುತ್ರಿಯರು ಇದ್ದಾರೆ.

ADVERTISEMENT

ಹಲವು ಕಾಲದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದರು.

ಬಸವರಾಜಪ್ಪ ಅವರು ಪ್ರಸ್ತುತ ಪೀಠಾಧಿಪತಿಯಾಗಿರುವ ಡಾ.ಶರಣಬಸವಪ್ಪ ಅಪ್ಪ ಅವರ ಕಿರಿಯ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.