ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ: ಸರ್ವಜ್ಞ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 20 ಮೇ 2022, 5:07 IST
Last Updated 20 ಮೇ 2022, 5:07 IST
ಗೌರಿ ಪಾಟೀಲ99.04
ಗೌರಿ ಪಾಟೀಲ99.04   

ಕಲಬುರಗಿ: ನಗರದ ಸರ್ವಜ್ಞ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದು, ಶಾಲೆಯ ವಿದ್ಯಾರ್ಥಿನಿ ಗೌರಿ ಶರಣಬಸಪ್ಪ ಪಾಟೀಲ ಶೇ 99.04 ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಭಾಗ್ಯಶ್ರೀ ನಿಂಗಣ್ಣ ಶೇ 98.24 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಅಂಜನಾ ಶರಣಗೌಡ ಪಾಟೀಲ ಶೇ 97.92 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ ಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದ ಗೌರಿ ಪಾಟೀಲಗೆ ಸನ್ಮಾನಿಸಿದರು. ಫಲಿತಾಂಶ ಪಡೆದ ಅಗ್ರಶ್ರೇಣಿ ಪಡೆದ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ತಮ್ಮ ಗುರುಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಮುಖ್ಯ ಶೈಕ್ಷಣಿಕ ನಿರ್ದೇಶಕ ಅಭಿಷೇಕ್ ಸಿ. ಪಾಟೀಲ, ನಿರ್ದೇಶಕಿ ಸಂಗೀತಾ ಪಾಟೀಲ, ಕರುಣೇಶ ಹಿರೇಮಠ, ಗುರುರಾಜ ಕುಲಕರ್ಣಿ, ಪ್ರಾಂಶುಪಾಲ ವಿಜಯ ನಾಲವಾರ, ಸಂಯೋಜಕಿ ಕವಿತಾ ಪಾಟೀಲ, ನಾಗಮ್ಮ ಮತ್ತು ಶಿಕ್ಷಕ ಶಿಕ್ಷಕಿಯರು ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.