ADVERTISEMENT

ಸವದತ್ತಿ ಯಲ್ಲಮ್ಮ, ಹುಲಿಗಿ ಅಭಿವೃದ್ಧಿ ಪ್ರಾಧಿಕಾರ ರಚನೆ: ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 6:43 IST
Last Updated 9 ಫೆಬ್ರುವರಿ 2024, 6:43 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಕಲಬುರಗಿ: ರಾಜ್ಯದ ಪ್ರಮುಖ ಧಾರ್ಮಿಕ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ‌ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದ ಐವಾನ್ ಇ‌ ಶಾಹಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ 87 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಹಣದ ಕೊರತೆ ಇಲ್ಲ. ಪ್ರವಾಸೋದ್ಯಮ ಇಲಾಖೆಯೂ 87 ಎಕರೆ ಹೊರತುಪಡಿಸಿ ಒಂದಷ್ಟು ಜಾಗ ಪಡೆದು ಅಭಿವೃದ್ಧಿಪಡಿಸಲಿದೆ ಎಂದರು.

ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು. ದೇವಸ್ಥಾನಕ್ಕೆ ಸಾಕಷ್ಟು ಕಾಣಿಕೆ ಹಣ ಬರುತ್ತಿದ್ದು, ಇದೇ ಹಣದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ADVERTISEMENT

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣ ಪ್ರಗತಿಯಲ್ಲಿದೆ. ಅಲ್ಲದೇ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಭವನ ನಿರ್ಮಾಣಕ್ಕೆ 5 ಎಕರೆ ಜಾಗ ಗುರುತಿಸಲಾಗಿದೆ ಎಂದರು.

ರಾಜ್ಯದಲ್ಲಿ ಶಕ್ತಿ ಯೋಜನೆ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಪ್ರಸಕ್ತ ಬಜೆಟ್‌ನಲ್ಲಿ ₹ 6,600 ಕೋಟಿ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.