ADVERTISEMENT

ಸಾವಿತ್ರಿಬಾಯಿ ಫುಲೆ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 12:55 IST
Last Updated 5 ಜನವರಿ 2023, 12:55 IST
ಫರಹತಾಬಾದ್‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು
ಫರಹತಾಬಾದ್‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು   

ಕಲಬುರಗಿ: ‘ಮಹಿಳೆಯರ ಶೋಷಣೆ, ದಬ್ಬಾಳಿಕೆ ವಿರುದ್ಧದ ಹೋರಾಟಕ್ಕೆ ಶಿಕ್ಷಣವೇ ಅಸ್ತ್ರವಾಗಿದೆ’ ಎಂದು ಉಪನ್ಯಾಸಕಿ ಲಲಿತಾ ರೆಡ್ಡಿ ಹೇಳಿದರು.

ತಾಲ್ಲೂಕಿನ ಫರತಾಬಾದ್‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಸಮಾಜದಲ್ಲಿ ಮಹಿಳೆಯರ ಶೋಷಣೆ ಹೆಚ್ಚುತ್ತಿದೆ. ಮಹಿಳೆಯರು ಒಗ್ಗಟ್ಟಿನಿಂದ ಹೋರಾಟದ ಅಗತ್ಯ ಇದೆ ಎಂದು ಹೇಳಿದರು.

ADVERTISEMENT

ಡಾ.ವಿಶ್ವನಾಥ ಹೊಸಮನಿ ಸಾವಿತ್ರಿಬಾಯಿ ಫುಲೆ ಜೀವನ ಕುರಿತ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಆ.ಬಿ. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ರಾಮಚಂದ್ರ ಹಕ್ಕಿ, ಮಮತಾ ಆರ್. ಇದ್ದರು.

ವಿದ್ಯಾರ್ಥಿಗಳಾದ ಸ್ಪೂರ್ತಿ, ಬಂಡಮ್ಮ, ಅಕ್ಷತಾ ಶರಣಮ್ಮ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸುಲ್ತಾನಾ ಕಾರ್ಯಕ್ರಮ ನಿರ್ವಹಿಸಿದರು. ಮಲ್ಲಮ್ಮ ಪ್ರಾರ್ಥಿಸಿದರೆ, ನೀಲಮ್ಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.