
ಕಲಬುರಗಿ: ಶರಣಬಸವೇಶ್ವರ ವಸತಿ ಸಂಯುಕ್ತ ಪದವಿಪೂರ್ವ ಕಾಲೇಜಿನ 113 ವಿದ್ಯಾರ್ಥಿಗಳು ಜನವರಿಯಲ್ಲಿ ನಡೆದ ಜೆಇಇ ಮೇನ್ ಪ್ರಥಮ ಹಂತದ ಪರೀಕ್ಷೆಯಲ್ಲಿ 90ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆದಿದ್ದಾರೆ.
ಮಲ್ಲಿಕಾರ್ಜುನ ಸೂರ್ಯಕಾಂತ ಉಡಗಿ–99.31 ಪರ್ಸೆಂಟೈಲ್ ಗಳಿಸಿ ಪ್ರಥಮ ಸ್ಥಾನದಲ್ಲಿದ್ದರೆ, ಅರ್ಪಿತ್ ಮಹಾಂತೇಶ–99.29 ಪರ್ಸೆಂಟೈಲ್ ಮೂಲಕ ದ್ವಿತೀಯ ಸ್ಥಾನದಲ್ಲಿದ್ದಾರೆ. ಚನ್ನಬಸವ ಕೊರಳ್ಳಿ–99.23 ಪರ್ಸೆಂಟೈಲ್ (ತೃತೀಯ), ಸಮರ್ಥ ಕಡಣಿ–99.13 ಪರ್ಸೆಂಟೈಲ್ (ನಾಲ್ಕನೇ), ವೆಂಕಟೇಶ ಕುಲಕರ್ಣಿ–99.12 ಪರ್ಸೆಂಟೈಲ್‌ನೊಂದಿಗೆ ಐದನೇ ಸ್ಥಾನ ಗಳಿಸಿದ್ದಾರೆ. 40 ವಿದ್ಯಾರ್ಥಿಗಳು 95ಕ್ಕಿಂತ ಅಧಿಕ, ಒಟ್ಟಾರೆ 217 ವಿದ್ಯಾರ್ಥಿಗಳು 80ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆದು ಸಾಧನೆ ಮಾಡಿದ್ದಾರೆ.
ಜೆಇಇ ಮೇನ್ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯುತ್ತದೆ. ಎರಡೂ ಹಂತಗಳಲ್ಲಿನ ಅತಿ ಹೆಚ್ಚಿನ ಪರ್ಸೆಂಟೈಲ್‍ನ್ನು ಪರಿಗಣಿಸಿ, ಜೆಇಇ ಅಡ್ವಾನ್ಸ್‌ಡ ಪರೀಕ್ಷೆ ಬರೆಯಲು ಅರ್ಹತೆ ನೀಡಲಾಗುತ್ತದೆ. ಈ ಮೂಲ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಎನ್‌ಐಟಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ. ಎರಡನೇ ಹಂತದ ಪರೀಕ್ಷೆಯು ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ.
‘ವಿದ್ಯಾಭಂಡಾರಿ ಶರಣಬಸವಪ್ಪ ಅಪ್ಪ ಅವರ ದೂರದೃಷ್ಟಿಯಿಂದ ಎಸ್.ಬಿ.ಆರ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೋಧನೆ ಮಾಡಲಾಗುತ್ತಿದೆ. ಎನ್.ಟಿ.ಎ ಮಾದರಿಯಲ್ಲಿಯೇ ಸತತವಾಗಿ ಕಂಪ್ಯೂಟರ್ ಆಧಾರಿತ ಟೆಸ್ಟ್ (ಸಿಬಿಟಿ)ಗಳನ್ನು ನಡೆಸಲಾಗುತ್ತದೆ. ಅದರ ಪರಿಣಾಮವಾಗಿ ಉತ್ತಮ ಫಲಿತಾಂಶ ಬಂದಿದೆ’ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್.ಅಪ್ಪ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ‘ಎಸ್‌ಬಿಆರ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಜೆಇಇ ಫೇಸ್–1 ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ’ ಎಂದು ತಿಳಿಸಿದ್ದಾರೆ. ಕಾಲೇಜಿನ ಪ್ರಾಚಾರ್ಯ ಎನ್.ಎಸ್.ದೇವರಕಲ್ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.