ADVERTISEMENT

ನೇಮಕಾತಿ ಅಕ್ರಮ: ಆನಂದ ಮೇತ್ರಿ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 21 ಮೇ 2022, 12:50 IST
Last Updated 21 ಮೇ 2022, 12:50 IST
ಆನಂದ ಮೇತ್ರಿ
ಆನಂದ ಮೇತ್ರಿ   

ಕಲಬುರಗಿ: ಸಿಪಿಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಬೆರಳಚ್ಚು ವಿಭಾಗದಲ್ಲಿ ಸಿಪಿಐ ಆಗಿದ್ದ ಆನಂದ ಮೇತ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್‌ ನ್ಯಾಯಾಲಯವು ಶನಿವಾರ ತಿರಸ್ಕರಿಸಿದೆ.

ಪ್ರಕರಣದ ಕಿಂಗ್‌ ‍ಪಿನ್‌ ಆರ್‌.ಡಿ. ಪಾಟೀಲ ಜೊತೆ ನಿಕಟ ಸಂಬಂಧ ಹೊಂದಿದ್ದ ಮೇತ್ರಿ ಪರೀಕ್ಷಾ ಕೇಂದ್ರಗಳಿಗೆ ಉತ್ತರ ಪತ್ರಿಕೆಗಳನ್ನು ಪೂರೈಸುವ ಕೆಲಸ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದ್ದರಿಂದ ಅವರನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿ ಪಡೆದಿದ್ದರು.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ ನೇಸರಗಿ ಅವರು ಪ್ರಕರಣದಲ್ಲಿ 27ನೇ ಆರೋಪಿಯಾಗಿರುವ ಆನಂದ ಮೇತ್ರಿ ಅರ್ಜಿಯನ್ನು ತಿರಸ್ಕರಿಸಿದರು. ‍ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಯಾವ ಆರೋಪಿಗಳಿಗೂ ಇಲ್ಲಿಯವರೆಗೆ ಜಾಮೀನು ಸಿಕ್ಕಿಲ್ಲ.

ADVERTISEMENT

ಸಿಐಡಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.