ಕಲಬುರಗಿ: ಇಲ್ಲಿನ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶೋರೂಂ ವತಿಯಿಂದ 154 ಿದ್ಯಾರ್ಥಿನಿಯರಿಗೆ ₹ 14.32 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ನಗರದ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ (ಕೆಕೆಸಿಸಿಐ) ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಮಲಬಾರ್ ಗ್ರೂಪ್‌ನ ವಿದ್ಯಾರ್ಥಿ ವೇತನವನ್ನು ವಿತರಿಸಿದರು.
ಮಲಬಾರ್ ಗ್ರೂಪ್ ಅಧ್ಯಕ್ಷ ಎಂ.ಪಿ.ಅಹಮ್ಮದ್ ಮಾತನಾಡಿ, ‘ಕರ್ನಾಟಕದಲ್ಲಿ 491 ಕಾಲೇಜುಗಳ 5,501 ಹೆಣ್ಣುಮಕ್ಕಳ ವ್ಯಾಸಂಗಕ್ಕೆ ನೆರವಾಗುವ ದೃಷ್ಟಿಯಿಂದ ಒಟ್ಟು ₹ 4.74 ಕೋಟಿ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.
‘ಮಲಬಾರ್ ಚಾರಿಟಬಲ್ ಟ್ರಸ್ಟ್ (ಎಂಸಿಟಿ) ಮೂಲಕ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಸಮೂಹ ಸಂಸ್ಥೆಯು ತನ್ನ ವಾರ್ಷಿಕ ಲಾಭದ ಶೇ 5ರಷ್ಟು ಭಾಗವನ್ನು ಶಿಕ್ಷಣ, ಆರೋಗ್ಯ ರಕ್ಷಣೆ, ಪರಿಸರ ಸುಸ್ಥಿರತೆ ಮತ್ತು ಬಡತನ ನಿರ್ಮೂಲನೆಯನ್ನು ಒಳಗೊಂಡ ಸಿಎಸ್‍ಆರ್ ಉಪಕ್ರಮಗಳಿಗೆ ಮೀಸಲಿಡುತ್ತಿದೆ. ಇದು ದುರ್ಬಲ ವರ್ಗದ ಸಮುದಾಯಗಳ ಸಬಲೀಕರಣದ ಉನ್ನತಿಗೆ ಸಹಕಾರಿಯಾಗುತ್ತಿದೆ’ ಎಂದರು.
ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಎಸ್.ಮೂಲಗೆ, ಲಾಲ್ ಅಹಮ್ಮದ್ ಬಾಂಬೆಸೇಟ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ನಿರ್ವಹಣಾ ತಂಡದ ಸದಸ್ಯರು, ಗ್ರಾಹಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.