ADVERTISEMENT

ಕಲಬುರ್ಗಿ: ಹೆಳವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 7:13 IST
Last Updated 10 ಆಗಸ್ಟ್ 2021, 7:13 IST

ಕಲಬುರ್ಗಿ: ಜಿಲ್ಲೆಯ ಅಲೆಮಾರಿ ಹೆಳವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಖಿಲ ಕರ್ನಾಟಕ ಹೆಳವ ಸಮಾಜ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಸಮಾಜದ ಜಿಲ್ಲಾಘಟಕದ ಅಧ್ಯಕ್ಷ ಸಾಯಬಣ್ಣ ಹೆಳವರ ತಿಳಿಸಿದ್ದಾರೆ.

2020–21ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 75 ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅಗಸ್ಟ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದಿದ್ದಾರೆ.

ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ (ಮೊ 99013 01254), ಸಾಯಬಣ್ಣ ಹೆಳವರ (ಮೊ. 9900836221) ಹಾಗೂ ಬಸವರಾಜ ಹೆಳವರ (89706 66424) ಅವರನ್ನು ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.