ಕಲಬುರಗಿ ನಗರದಲ್ಲಿ ಸೋಮವಾರ ಬುದ್ಧಿಮಾಂದ್ಯ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನದ ಮೇಲೆ ವಿದ್ಯುತ್ ತಂತಿ ಕಡಿದು ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ವಿದ್ಯುತ್ ಶಾಕ್‌ನಿಂದಾಗಿ ಭಾಗ್ಯಶ್ರೀ ರವೀಂದ್ರ ಎಂಬುವವರ ಹೊಟ್ಟೆ, ಕೈ ಮತ್ತು ಕಾಲಿಗೆ ಸುಟ್ಟ ಗಾಯಗಳಾಗಿವೆ. ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆಯ ವಿಭಜಕ ದಾಟುವಾಗ ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ 14 ವರ್ಷದ ಬಾಲಕ ಕೆಲವು ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.