ADVERTISEMENT

ಕಲಬುರಗಿ: ಶಾಲಾ, ಕಾಲೇಜುಗಳಿಗೆ 11ರಂದು ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 15:32 IST
Last Updated 10 ಜುಲೈ 2022, 15:32 IST
   

ಕಲಬುರಗಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಇದೇ 11ರಂದು ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಶಾಲೆಗಳಿಗೆ ಮಾತ್ರ ರಜೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ADVERTISEMENT

1 ರಿಂದ 10ನೇ ತರಗತಿಯವರೆಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.