
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಕಲಬುರಗಿ: ಜ.8ರಂದು ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಜಾಲತಾಣಗಳಲ್ಲಿ ಹರಿದಾಡಿದ್ದು, ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ತನಕ ನಿಗದಿಯಾಗಿದ್ದ ಇಂಗ್ಲಿಷ್ ಭಾಷಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ
ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿಬಿಟ್ಟಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಡಿಡಿಪಿಯು ಸುರೇಶ ಅಕ್ಕಣ್ಣ ಅವರು ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗೆಗೆ ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.