ADVERTISEMENT

ಕಲಬುರ್ಗಿ | ಶಾಸಕ ತೇಲ್ಕೂರಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 9:22 IST
Last Updated 9 ಜುಲೈ 2020, 9:22 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಕಲಬುರ್ಗಿ: ಜಿಲ್ಲೆಯ ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೇಲ್ಕೂರ ಅವರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಶಾಸಕರ ಆಪ್ತ ಸಹಾಯಕರಿಗೆ ಎರಡು ದಿನಗಳ ಹಿಂದೆ ಪಾಸಿಟಿವ್ ಬಂದಿದ್ದರಿಂದ ಶಾಸಕರೂ ಪರೀಕ್ಷೆಗೆ ಒಳಗಾಗಿದ್ದರು. ಗುರುವಾರ ಶಾಸಕರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದ್ದು, ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಸೊಂಕಿನ ಯಾವುದೇ ಲಕ್ಷಣಗಳು ಇಲ್ಲ. ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.