ADVERTISEMENT

ಸೇಡಂನಲ್ಲಿ ಛತ್ತೀಸಗಡದ ಇಬ್ಬರು ಕಾರ್ಮಿಕರ ಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 6:55 IST
Last Updated 9 ಸೆಪ್ಟೆಂಬರ್ 2025, 6:55 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಸೇಡಂ: ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ADVERTISEMENT

ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮಧ್ಯೆ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ನಿತ್ಯ ಜಗಳವಾಗುತ್ತಿತ್ತು. ಭಾನುವಾರ ರಾತ್ರಿ ಜಗಳ ತಾರಕ್ಕೇರಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಛತ್ತೀಸಗಡ ರಾಜ್ಯದ ಗೋಪಾಲ ಪಟೇಲ್ (31), ಗೋಪಾಲ‌ ವರ್ಮಾ (29) ಮೃತ ಕಾರ್ಮಿಕರು. ವಿಜಯ ನಶಾದ ಎಂಬ ಕಾರ್ಮಿಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರ, ಶರಣಪ್ಪ ಜಾಕನಳ್ಳಿ, ಕಾನ್‌ಸ್ಟೆಬಲ್‌ಗಳಾದ ಬಾಲಕೃಷ್ಣ ರೆಡ್ಡಿ, ರವಿಕುಮಾರ್, ನಾಗರಾಜ, ಹೊನ್ನಪ್ಪ, ಮಾಣಿಕಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.