ADVERTISEMENT

3.64 ಲಕ್ಷ ಟನ್ ಉತ್ಪಾದನಾ ಗುರಿ: ಚಂದ್ರಕಾಂತ ಜೀವಣಗಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 6:26 IST
Last Updated 5 ಜೂನ್ 2021, 6:26 IST
ಕಲಬುರ್ಗಿ ಹೊರವಲಯದ ರೈತ ಸಂಪರ್ಕ ಕೇಂದ್ರದಲ್ಲಿ ಈಚೆಗೆ ಕೃಷಿ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದರು
ಕಲಬುರ್ಗಿ ಹೊರವಲಯದ ರೈತ ಸಂಪರ್ಕ ಕೇಂದ್ರದಲ್ಲಿ ಈಚೆಗೆ ಕೃಷಿ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದರು   

ಕಲಬುರ್ಗಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕಲಬುರ್ಗಿ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ಒಟ್ಟು 99,671 ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆ ಹಾಗೂ 3.64 ಲಕ್ಷ ಟನ್ ಉತ್ಪಾದನಾ ಗುರಿ ಹೊಂದಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.

ಪ್ರಸಕ್ತ ಹಂಗಾಮಿನಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜವನ್ನು ಪೂರೈಸಲು ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಉದ್ದು, ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತು ಸೋಯಾಬಿನ್ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು, ಕೋವಿಡ್-19 ಕಾರಣ ರೈತರು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಕೋರಿದ್ದಾರೆ.

ರಸಗೊಬ್ಬರವನ್ನು ಸಹ ಎಲ್ಲ ಹೋಬಳಿಯ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ರಸಗೊಬ್ಬರ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.