ಕಲಬುರಗಿ: ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ಬಜಾಜ್ ಎಂಜಿನಿಯರಿಂಗ್ ಕೌಶಲ ತರಬೇತಿ ಕೇಂದ್ರ ಸ್ಥಾಪಿಸಿರುವ ಉನ್ನತ ಮಟ್ಟದ ಪ್ರಯೋಗಾಲಯಗಳಲ್ಲಿ ಕೌಶಲಾಧಾರಿತ ತರಬೇತಿ ಪಡೆಯಲು ನಗರದ ಶರಣಬಸವ ವಿಶ್ವವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
‘6 ತಿಂಗಳು ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಳೆದ ಶೈಕ್ಷಣಿಕ ವರ್ಷ ಮೊಹ್ಸಿನ್ ಶೇಖ್ ಮತ್ತು ರಾಹಿಲ್ ತರಬೇತಿಗೆ ಆಯ್ಕೆಯಾಗಿದ್ದರು. ಅವರಿಬ್ಬರಿಗೂ ಉದ್ಯೋಗ ಸಿಕ್ಕಿದೆ. ಮೊಹ್ಸಿನ್ ಶೇಖ್ ಬೆಂಗಳೂರಿನ ಎಚ್‌ಸಿಎಲ್ ಟೆಕ್ನಾಲಜಿಯಲ್ಲಿ ನೇಮಕಗೊಂಡಿದ್ದಾರೆ. ರಾಹಿಲ್ ಪುಣೆಯ ಎಸ್.ಎಂ. ಆಟೋಸ್‌ನಲ್ಲಿ ಉದ್ಯೋಗ ಪಡೆದಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಸಚಿವ ಎಸ್.ಜಿ.ಡೊಳ್ಳೆಗೌಡರ್, ಡೀನ್ ಲಕ್ಷ್ಮಿ ಪಾಟೀಲ ಮಾಕಾ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.