
ಕಲಬುರಗಿ: ‘ಭಾರತ ಜನಗಣತಿಯ ಸಿದ್ಧತೆಗಳ ಭಾಗವಾಗಿ ರಾಜ್ಯದಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ಧತೆ ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ ಮನೆಪಟ್ಟಿ ಮತ್ತು ಗೃಹ ಗಣತಿ ಕಾರ್ಯ ಏಪ್ರಿಲ್ 16ರಿಂದ ಮೇ 15 ರವರೆಗೆ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
‘ಮನೆ ಮನೆ ಗಣತಿ ಕಾರ್ಯ ಮುನ್ನ ಏಪ್ರಿಲ್ 1ರಿಂದ 15ರವರೆಗೆ ಜಿಲ್ಲೆಯ ನಾಗರಿಕರಿಗೆ ಸ್ವಯಂ-ಗಣತಿ ಮಾಹಿತಿ ಒದಗಿಸಲು ಅವಕಾಶ ನೀಡಲಾಗಿದೆ. ಇನ್ನು ಎರಡನೇ ಹಂತವಾಗಿ ಜನಸಂಖ್ಯೆ ಗಣತಿ ಕಾರ್ಯ 2027ರ ಫೆಬ್ರವರಿಯಲ್ಲಿ ನಡೆಯಲಿದೆ. ಜನಗಣತಿಯಲ್ಲಿ ಮೊದಲ ಬಾರಿಗೆ ಡಿಜಿಟಲ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಗಣತಿಗಾರರು ಮೊಬೈಲ್ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ನಾಗರಿಕರು ವೆಬ್ ಪೋರ್ಟಲ್ ಮೂಲಕ ಸ್ವಯಂ ಮಾಹಿತಿಯನ್ನು ಸಲ್ಲಿಸುವ ವ್ಯವಸ್ಥೆಯೂ ಇರಲಿದೆ. ಗಣತಿಯಲ್ಲಿ ಸಂಗ್ರಹವಾಗುವ ಮಾಹಿತಿಗೆ ಭದ್ರತೆ ನೀಡಲು ಬಹು ಹಂತದ ಸುರಕ್ಷತಾ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಗಣತಿಗಾರರಿಗೆ ಸಹಕರಿಸುವ ಮೂಲಕ ಜನಗಣತಿ-2027 ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.