ADVERTISEMENT

ಕಲಬುರಗಿ: ಶಿವರಾವ ಮಾಲಿಪಾಟೀಲಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 4:18 IST
Last Updated 10 ಆಗಸ್ಟ್ 2022, 4:18 IST
ಶಿವರಾವ ಮಾಲಿಪಾಟೀಲ ದಂಪತಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರೊ. ದಯಾನಂದ ಅಗಸರ, ಶಿವಶರಣಪ್ಪ ಮೂಳೆಗಾಂವ ಇತರರು ಇದ್ದರು
ಶಿವರಾವ ಮಾಲಿಪಾಟೀಲ ದಂಪತಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರೊ. ದಯಾನಂದ ಅಗಸರ, ಶಿವಶರಣಪ್ಪ ಮೂಳೆಗಾಂವ ಇತರರು ಇದ್ದರು   

ಕಲಬುರಗಿ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಶಿವರಾವ ಮಾಲಿಪಾಟೀಲ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಶಿವರಾವ ಮಾಲಿಪಾಟೀಲ ಅವರು ಸುಮಾರು 19 ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗದ ಅತಿ ಹೆಚ್ಚಿನ ಸುಮಾರು 2500 ವಿದ್ಯಾರ್ಥಿನಿಯರು ಇರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. 1988ರಿಂದ 2003ರವರೆಗೆ ಸತತ ಹೋರಾಟ ನಡೆಸಿದ್ದರಿಂದ ಅರೆಕಾಲಿಕ ಉಪನ್ಯಾಸಕರು ಕಾಯಂ ಆದರು. ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲೆಯ ಪ್ರತಿನಿಧಿಯಾಗಿ, ರಾಜ್ಯ ಉಪನ್ಯಾಸಕರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ’ ಎಂದರು. ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಅಧ್ಯಕ್ಷ ನಿಂಗೇಗೌಡ ಹಾಗೂ ಜಿಲ್ಲೆಯ ಉಪನ್ಯಾಸಕರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.