ADVERTISEMENT

ಕಲಬುರ್ಗಿ: ₹ 7 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 4:26 IST
Last Updated 7 ಅಕ್ಟೋಬರ್ 2021, 4:26 IST

ಕಲಬುರ್ಗಿ: ಪಡಿತರ ಚೀಟಿದಾರರಿಗೆ ಹಂಚಿಕೆ ಮಾಡಬೇಕಾದ ಅಕ್ಕಿಯನ್ನು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನ ಮೇಲೆ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿ, ಸುಮಾರು ₹ 7 ಲಕ್ಷ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿಯನ್ನು ಸಾರ್ವಜನಿಕರಿಗೆ ವಿತರಣೆ ಮಾಡದೆ, ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಮಾಹಿತಿಯಂತೆಗ್ರಾಮೀಣ ಠಾಣೆಯ ಪಿಐ ಭಾಸು ಚವ್ಹಾಣ ನೇತೃತ್ವದಲ್ಲಿ ಪೊಲೀಸರು ಗೋದಾಮಿನ ಮೇಲೆ ದಾಳಿ ಮಾಡಿದ್ದಾರೆ.

ಗೋದಾಮಿನಲ್ಲಿ ನೂರಾರು ಚೀಲ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು. ಇದನ್ನು ಪೊಲೀಸರು ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರೈ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾದರು.

ADVERTISEMENT

ಕಿರಣಕುಮಾರ, ಮಧುಕರ್ ಮತ್ತು ಭಾಸ್ಕರ್ ಎಂಬುವವರು ಸೇರಿಕೊಂಡು ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹ ಮಾಡುತ್ತಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ಕಾಲಕ್ಕೆ ಗೋದಾಮಿನಲ್ಲಿದ್ದವರು ಪರಾರಿಯಾಗಿದ್ದಾರೆ.ಆಹಾರ ಇಲಾಖೆ ಅಧಿಕಾರಿಗಳು ನೀಡಿರುವ ದೂರಿನಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.