ಚಿತ್ತಾಪುರ (ಕಲಬುರಗಿ ಜಿಲ್ಲೆ): ಪಟ್ಟಣದಲ್ಲಿ ಹುಡುಗನೊಬ್ಬ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದು, ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಎಫ್ಐಅರ್ ದಾಖಲಾದ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.
ಶಹಾಬಾದ್ ರಸ್ತೆ ಮಾರ್ಗದಲ್ಲಿನ ಪಟ್ಟಣದಲ್ಲಿರುವ ಸ್ಥಳೀಯ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದೊಳಗೆ ಆ.26 ರಂದು ರಾತ್ರಿ 7.30 ರಿಂದ 8 ಗಂಟೆಯ ನಡುವೆ ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ. ಪಟ್ಟಣದ 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ದೌರ್ಜನ್ಯಕ್ಕೊಳಗಾದ ಬಾಲಕ ಮನೆಗೆ ತೆರಳಿ ತನ್ನ ತಾಯಿಯ ಮುಂದೆ ನಡೆದ ವಿಷಯ ತಿಳಿಸಿದ್ದಾನೆ. ಆಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೌರ್ಜನ್ಯಕ್ಕೊಳಗಾದ ಬಾಲಕನ ತಾಯಿಯು ಆ.27 ರಂದು ಪೊಲೀಸ್ ಠಾಣೆಗೆ ತೆರಳಿ ತನ್ನ ಮಗನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬೆನ್ನಲ್ಲೇ ಲೈಂಗಿನ ದೌರ್ಜನ್ಯ ಎಸೆಗಿದ ಹುಡುಗನನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೋಕ್ಸೊ ನಿಯಮದಂತೆ ತನಿಖೆ, ವೈದ್ಯಕೀಯ ತಪಾಸಣೆ ಮಾಡಿಸಿ ಆರೋಪಿಯನ್ನು ಬಂಧಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ’ಪ್ರಜಾವಾಣಿ’ಗೆ ಹೇಳಿವೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.