ADVERTISEMENT

ಜೇವರ್ಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 16:00 IST
Last Updated 24 ಜನವರಿ 2025, 16:00 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಕಲಬುರಗಿ: ಶಾಲೆಗೆ ಹೋಗಿದ್ದ ಹನ್ನೊಂದು ವರ್ಷದ ಬಾಲಕಿಯನ್ನು ಆಟೊದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ADVERTISEMENT

ಈ ಸಂಬಂಧ ಆರೋಪಿ ಅಬ್ಬಾಸ್‌ ಅಲಿ ಜಾಫರ್‌ ಗೌನಳ್ಳಿ(21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

‘5ನೇ ತರಗತಿ ಓದುತ್ತಿದ್ದ ನನ್ನ ಮಗಳು ಅಬ್ಬಾಸ್‌ ಅಲಿಯ ಆಟೊರಿಕ್ಷಾದಲ್ಲಿ ಶಾಲೆಗೆ ಹೋಗಿಬರುತ್ತಿದ್ದಳು. ಜ.20ರಂದು ಸಂಜೆ ಮಗಳನ್ನು ಆಟೊದಲ್ಲಿ ಅಪಹರಿಸಿದ ಅಬ್ಬಾಸ್‌ಅಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ಬಾಲಕಿಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

‘ದೂರು ದಾಖಲಾದ ದಿನವೇ ಆರೋಪಿ ಅಬ್ಬಾಸ್‌ ಅಲಿಯನ್ನು ಬಂಧಿಸಲಾಗಿದೆ. ಈಗ ಆತ ಇಲ್ಲಿ ಆಟೊ ಚಾಲನೆ ಕೆಲಸ ಮಾಡುತ್ತಿಲ್ಲ. ಬೆಂಗಳೂರಿಗೆ ದುಡಿಯಲು ಹೋಗಿ ವಾಪಸ್‌ ಬಂದಿದ್ದಾಗ ಈ ಕೃತ್ಯ ಎಸಗಿದ್ದಾನೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜೇವರ್ಗಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ಯುವಕ ಮೆಹಬೂಬ್‌ ನೀಡಿದ ಕಿರುಕುಳಕ್ಕೆ ಬೇಸತ್ತು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಳೆದ ವಾರ ಜೇವರ್ಗಿ ಬಂದ್‌ ಮಾಡಿ ಪ್ರತಿಭಟಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.