ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 12:32 IST
Last Updated 3 ಜನವರಿ 2019, 12:32 IST

ಕಲಬುರ್ಗಿ: ಸೇಡಂ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಆನಂದ ಅಲಿಯಾಸ್ ಅನ್ಯಾ ಇಟಗಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಬಾಲಕಿಯ ಮನೆಗೆ ನುಗ್ಗಿದ್ದ ಈತ ಲೈಂಗಿಕ ದೌರ್ಜನ್ಯ ಎಸಗಿದ್ದ. ಆ ಬಳಿಕ ಅಪಹರಿಸಿ, ಬೇರೆಡೆ ಕರೆದುಕೊಂಡು ಹೋಗಿ ಮತ್ತೆ ದೌರ್ಜನ್ಯ ಎಸಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು ಜೀವಾವಧಿ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿದರು. ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ ₹5 ಲಕ್ಷ ಹಾಗೂ ದಂಡದ ಹಣದಲ್ಲಿ ₹1.50 ಲಕ್ಷ ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿದರು.

ADVERTISEMENT

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಎಲ್.ವಿ.ಚಟ್ನಾಳಕರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.