ವಾಡಿ: ಭಾಲ್ಕಿ ತಾಲ್ಲೂಕಿನ ದಾಡಗಿ ಗ್ರಾಮದ ವೃತ್ತದಲ್ಲಿದ್ದ ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಯುವ ಘಟಕದ ವಾಡಿ ಸಮಿತಿ ಅಧ್ಯಕ್ಷ ಮಹಾಲಿಂಗ ಶೆಳ್ಳಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಜಗತ್ತಿಗೆ ಸತ್ಯ, ನ್ಯಾಯದ ಸಂದೇಶ ನೀಡಿದ ಬಸವೇಶ್ವರರು ಇಡೀ ಮಾನವ ಕುಲದ ಅಸ್ಮಿತೆಯ ಸಂಕೇತವಾಗಿದ್ದಾರೆ. ಅವರ ಮೂರ್ತಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.