ಕಲಬುರಗಿ: ಆ.14ರಂದು ಲಿಂಗೈಕ್ಯರಾದ ಶರಣಬಸವೇಶ್ವರರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವದ ವೇದಿಕೆ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಶರಣಬಸವೇಶ್ವರರ ಮಹಾ ಸಂಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಶರಣಬಸವಪ್ಪ ಅಪ್ಪ ಚಿತ್ರಕ್ಕೆ ಪುಷ್ಪದಳ ಎರಚಿ ಶ್ರದ್ಧಾಂಜಲಿ ಅರ್ಪಿಸಿದರು.
ಬಳಿಕ ದಾಕ್ಷಾಯಣಿ ಎಸ್ ಅಪ್ಪ, ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್.ಅಪ್ಪ, ಶಿವಾನಿ ಎಸ್.ಅಪ್ಪ ಭವಾನಿ ಎಸ್.ಅಪ್ಪ, ಮಹೇಶ್ವರಿ ಎಸ್. ಅಪ್ಪ ಹಾಗೂ ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಧೈರ್ಯ ತುಂಬಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.