‘ಕಲ್ಯಾಣ’ದ ಆರಾಧ್ಯ ದೈವ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಶರಣಬಸವೇಶ್ವರ ಅಪ್ಪ ಅವರು ದೇಶದ ಹಲವು ಗಣ್ಯರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಕಲಬುರಗಿಗೆ ಬರುತ್ತಿದ್ದ ಹಲವು ಗಣ್ಯರು ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ‘ಅಪ್ಪ’ ಅವರ ದರ್ಶನ ಪಡೆದು ಉಬಯಕುಶಲೋಪರಿ ವಿಚಾರಿಸುವುದು ಸರ್ವೇ ಸಾಮಾನ್ಯವಾಗಿತ್ತು. ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಜೈಲ್ ಸಿಂಗ್, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಎಚ್.ಡಿ. ದೇವೇಗೌಡ, ಐ.ಕೆ. ಗುಜ್ರಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿಗಳಾದ ಎಸ್. ನಿಜಲಿಂಗಪ್ಪ, ರಾಮಕೃಷ್ಣ ಹೆಗಡೆ, ಗುಂಡೂರಾವ್, ವೀರಪ್ಪ ಮೊಯ್ಲಿ, ಎನ್.ಧರ್ಮಸಿಂಗ್, ಬಿ.ಎಸ್. ಯಡಿಯೂರಪ್ಪ ಸೇರಿ ಹಲವು ರಾಜಕೀಯ ನಾಯಕರು ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ಮಾಡಿರುವುದು ವಿಶೇಷ. ದೇಶದ ಕೆಲವು ಗಣ್ಯರು ‘ಅಪ್ಪ’ ಅವರೊಂದಿಗೆ ಕಳೆದ ಕ್ಷಣಗಳ ಜ್ಞಾಪಕ ಚಿತ್ರಶಾಲೆಯ ನೋಟ ಇಲ್ಲಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.