ಕಲಬುರಗಿ: ‘ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಶರಣಬಸವಪ್ಪ ಅಪ್ಪಾ ಅವರ ಆರೋಗ್ಯವು ಸ್ಥಿರವಾಗಿದೆ’ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದ್ದಾರೆ.
‘ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ವೈದ್ಯರ ತಂಡ ತಿಳಿಸಿದೆ’ ಎಂದು ಅವರು ಹೇಳಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ದಾಕ್ಷಾಯಿಣಿ ಅಪ್ಪಾ ಅವರು, ‘ಅಪ್ಪಾ ಅವರ ಆರೋಗ್ಯ ಸ್ಥಿರವಾಗಿರುವುದರಿಂದ ಶರಣಬಸವೇಶ್ವರ ಸಂಸ್ಥಾನದ ಭಕ್ತರು ಆತಂಕಗೊಳ್ಳಬಾರದು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹರಡಿರುವ ವದಂತಿಗಳಿಗೆ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.