ಕಲಬುರಗಿ: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಹಿಂದೆ ಜಾತಿ ಲೆಕ್ಕಾಚಾರದ ಹುನ್ನಾರ ಅಡಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಆರೋಪಿಸಿದರು.
‘ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳಿವೆ. ಸಾಕಷ್ಟು ಶಿಕ್ಷಕರಿಗೆ ಸಮರ್ಪಕ ತರಬೇತಿಯನ್ನೂ ಕೊಟ್ಟಿಲ್ಲ. ನಿವೃತ್ತಿ ಅಂಚಿನಲ್ಲಿರುವ, ಅನಾರೋಗ್ಯದಿಂದ ಬಳಲುತ್ತಿರುವವರ ಮೇಲೆ ಒತ್ತಡ ಹೇರಿ ಸಮೀಕ್ಷೆ ಮಾಡಿಸಿ, ಸರ್ಕಾರ ಏನು ಸಾಧಿಸಲು ಹೊರಟಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
‘ಶಿಕ್ಷಕರನ್ನು ಶೈಕ್ಷಣಿಕ ಕಾರ್ಯಬಿಟ್ಟು ಬೆರೆಯದ್ದಕ್ಕೆ ಬಳಸದಂತೆ 2025ರ ಜುಲೈ 1ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಬಳಿಕ ಆ ಆದೇಶವನ್ನು ಜುಲೈ 24ರಂದು ಪರಿಷ್ಕರಿಸಿ ಚುನಾವಣಾ ಕಾರ್ಯಗಳಿಗೆ ಬಳಸಬಹುದು ಎಂದು ಆದೇಶಿಸಲಾಗಿದೆ. ಅದಾಗ್ಯೂ, ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರ ಬಳಕೆ ಮಾಡಲಾಗಿದೆ. ಸಮೀಕ್ಷೆ ಏನು ಚುನಾವಣಾ ಕಾರ್ಯವೇ?’ ಎಂದು ಪ್ರಶ್ನಿಸಿದರು.
‘ಸಮೀಕ್ಷೆಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಮಾಡಲಾದ ಶಿಕ್ಷಕರ ಅಮಾನತ್ತನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.