ADVERTISEMENT

ಭೀಮಾ ನದಿಯ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಅಹವಾಲು ಆಲಿಸಿದ ಸಚಿವೆ ಶಶಿಕಲಾ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 8:42 IST
Last Updated 18 ಅಕ್ಟೋಬರ್ 2020, 8:42 IST
ಶಶಿಕಲಾ ಜೊಲ್ಲೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿರುವುದು
ಶಶಿಕಲಾ ಜೊಲ್ಲೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿರುವುದು   
""
""

ವಿಜಯಪುರ: ಭೀಮಾ ನದಿಯ ಪ್ರವಾಹ ಪೀಡಿತ ಇಂಡಿ ತಾಲ್ಲೂಕಿನ ಉಮರಾಣಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು.

ಬಳಿಕ ಮಾತನಾಡಿದ ಸಚಿವೆ, ಮನೆಗಳಿಗೆ ನದಿ ನೀರು ನುಗ್ಗಿ ತೊಂದರೆ ಅನುಭವಿಸಿದ ಪ್ರತಿ ಕುಟುಂಬಕ್ಕೆ ತಕ್ಷಣ ₹10 ಸಾವಿರ ಪರಿಹಾರ ಒದಗಿಸಲಾಗುವುದು ಎಂದರು. ಬೆಳೆಹಾನಿ ಸರ್ವೇ ಮಾಡಿ, ವರದಿ ಬಂದ ತಕ್ಷಣ ರೈತರ ಅಕೌಂಟ್ ಗೆ ಪರಿಹಾರ ಹಣ ಹಾಕಲಾಗುವುದು ಎಂದು ಹೇಳಿದರು.


ಜಿಲ್ಲಾಡಳಿತ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ನಾನು ನಿಮ್ಮ ಜೊತೆಗಿದ್ದು, ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ನನಗೆ ಕೋವಿಡ್ ಬಂದ ಕಾರಣ ತಕ್ಷಣ ಬರಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಶಾಸಕ ದೇವಾನಂದ ಚವ್ಹಾಣ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿ.ಪಂ.ಸಿಇಒ ಗೋವಿಂದ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT