ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ನೇಮಕ ಮಾಡಿ ವಿ.ವಿ. ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸೋಮವಾರ ನೇಮಕ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನವರಾದ ಉಡಿಕೇರಿ ಅವರು ಕೆಲ ಕಾಲ ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ಕುಲಪತಿಯಾಗಿದ್ದ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ ನೇಮಕವಾಗಿದೆ. ಉಡಿಕೇರಿ ಅವರ ಅವಧಿ ನಾಲ್ಕು ವರ್ಷಗಳಾಗಿರಲಿವೆ.
ಇದುವರೆಗೆ ಪ್ರಭಾರ ಕುಲಪತಿಯಾಗಿ ಪ್ರೊ.ಗೂರು ಶ್ರೀರಾಮುಲು, ಪ್ರೊ.ಹೂವಿನಬಾವಿ ಬಾಬಣ್ಣ, ಪ್ರೊ.ಅಬ್ದುಲ್ ರಬ್ ಉಸ್ತಾದ್ ಅವರು ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.