ADVERTISEMENT

ಕಲಬುರಗಿ: ವಿಮಾನ ನಿಲ್ದಾಣದಲ್ಲಿ ಸಿಎಂಗೆ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 6:12 IST
Last Updated 17 ಸೆಪ್ಟೆಂಬರ್ 2025, 6:12 IST
ಕಲಬುರಗಿಯ ಐವಾನ್ ಇ ಶಾಹಿ ಅತಿಥಿಗೃಹಕ್ಕೆ ಮಂಗಳವಾರ ರಾತ್ರಿ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಪುಸ್ತಕ ನೀಡಿ ಸ್ವಾಗತಿಸಿದರು. ಸಚಿವರಾದ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಈ ಸಂದರ್ಭದಲ್ಲಿದ್ದರು
ಕಲಬುರಗಿಯ ಐವಾನ್ ಇ ಶಾಹಿ ಅತಿಥಿಗೃಹಕ್ಕೆ ಮಂಗಳವಾರ ರಾತ್ರಿ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಪುಸ್ತಕ ನೀಡಿ ಸ್ವಾಗತಿಸಿದರು. ಸಚಿವರಾದ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಈ ಸಂದರ್ಭದಲ್ಲಿದ್ದರು   

ಕಲಬುರಗಿ: ಇದೇ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದ (ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ)ಲ್ಲಿ ಪಾಲ್ಗೊಳ್ಳಲು ನಗರಕ್ಕೆ ಮಂಗಳವಾರ ರಾತ್ರಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಿದರು.

9.15ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬಂದ ಮುಖ್ಯಮಂತ್ರಿ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಜೊತೆಗಿದ್ದರು. ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ಶರಣಬಸಪ್ಪ ದರ್ಶನಾಪುರ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ, ಶಾಸಕಿ ಕನೀಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಮೇಯರ್ ವರ್ಷಾ ಜಾನೆ, ಉಪಮೇಯರ್ ತೃಪ್ತಿ ಲಾಖೆ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ ಈ ಸಂದರ್ಭದಲ್ಲಿದ್ದರು.

ಮುಖ್ಯಮಂತ್ರಿ ಬೆಂಗಾವಲು ಪಡೆಯನ್ನು ಹಿಂಬಾಲಿಸಿಕೊಂಡು ಐವಾನ್ ಇ ಶಾಹಿ ಅತಿಥಿಗೃಹಕ್ಕೆ ಶಾಸಕಿ ಕನೀಜ್ ಫಾತಿಮಾ, ಪುತ್ರ ಫರಾಜ್ ಅವರ ಹಿಂಬಾಲಕರನ್ನು ಪೊಲೀಸರು ಕೆಲ ಹೊತ್ತು ಮುಖ್ಯ ದ್ವಾರದ ಬಳಿಯೇ ತಡೆದರು. ನಂತರ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್ ಅವರು ಮಧ್ಯಪ್ರವೇಶಿಸಿ ಶಾಸಕಿ ಹಾಗೂ ಅವರ ಪುತ್ರನನ್ನು ಒಳಗೆ ಬಿಡಿಸಿದರು.

ADVERTISEMENT

ಐವಾನ್ ಇ ಶಾಹಿ ಅತಿಥಿಗೃಹಕ್ಕೆ ಬಂದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಮುಖ್ಯಮಂತ್ರಿ ಬೆಂಗಾವಲು ಪಡೆ ಅತಿಥಿಗೃಹಕ್ಕೆ ತೆರಳುವ ವೇಳೆ ಸುಮಾರು 10 ನಿಮಿಷಗಳ ಕಾಲ ಗುಲ್ಲಾಬವಾಡಿ ಕಡೆಯಿಂದ ಪಿಡಿಎ ಕಾಲೇಜು ಕಡೆ ಹೋಗುವ ಮಾರ್ಗದಲ್ಲಿ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.