ADVERTISEMENT

‘ಸಿದ್ಧರಾಮೇಶ್ವರರ ಕಾರ್ಯ ಅವಿಸ್ಮರಣೀಯ’

ಸಿದ್ಧರಾಮೇಶ್ವರರ 851ನೇ ಜಯಂತ್ಯುತ್ಸವ, ಜನಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 5:22 IST
Last Updated 15 ಮಾರ್ಚ್ 2023, 5:22 IST
ಜೇವರ್ಗಿ ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಭೋವಿ ವಡ್ಡರ ಸಮಾಜ ತಾಲ್ಲೂಕು ಘಟಕದಿಂದ ಆಯೋಜಿಸಲಾಗಿದ್ದ ಸಿದ್ಧರಾಮೇಶ್ವರರ 851ನೇ ಜಯಂತ್ಯುತ್ಸವ ಹಾಗೂ ಜನಜಾಗೃತಿ ಸಮಾವೇಶವನ್ನು ಶಾಸಕ ಡಾ. ಅಜಯಸಿಂಗ್ ಉದ್ಘಾಟಿಸಿದರು
ಜೇವರ್ಗಿ ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಭೋವಿ ವಡ್ಡರ ಸಮಾಜ ತಾಲ್ಲೂಕು ಘಟಕದಿಂದ ಆಯೋಜಿಸಲಾಗಿದ್ದ ಸಿದ್ಧರಾಮೇಶ್ವರರ 851ನೇ ಜಯಂತ್ಯುತ್ಸವ ಹಾಗೂ ಜನಜಾಗೃತಿ ಸಮಾವೇಶವನ್ನು ಶಾಸಕ ಡಾ. ಅಜಯಸಿಂಗ್ ಉದ್ಘಾಟಿಸಿದರು   

ಜೇವರ್ಗಿ: ‘ಶಿವಯೋಗಿ ಸಿದ್ಧರಾಮೇ ಶ್ವರರು ತಮ್ಮ ಜೀವನದುದ್ದಕ್ಕೂ ಸಮಾಜಮುಖಿ ಕಾರ್ಯಗಳ ಮೂಲಕ ಹೆಸರುವಾಸಿಯಾದ ಶ್ರೇಷ್ಠ ಶರಣ ರಾಗಿದ್ದರು. 1992ಕ್ಕೂ ಅಧಿಕ ವಚನಗಳನ್ನು ರಚಿಸುವ ಮೂಲಕ ಜ್ಞಾನದ ದೀವಿಗೆ ಹೊತ್ತಿಸಿ ಸಮಾಜಕ್ಕೆ ಬೆಳಕು ನೀಡಿದ್ದಾರೆ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರರ 851ನೇ ಜಯಂ ತ್ಯುತ್ಸವ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

ಸಿದ್ಧರಾಮೇಶ್ವರರು 12 ನೇ ಶತಮಾನದಲ್ಲಿ ಕೆರೆ, ಕಟ್ಟೆಗಳು ಹಾಗೂ ಬಾವಿಗಳನ್ನು ನಿರ್ಮಿಸುವ ಮೂಲಕ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲ ಕಲ್ಪಿಸಿದ್ದರು. ಪ್ರತಿಯೊಬ್ಬರು ಶಿವಯೋಗಿ ಸಿದ್ಧರಾಮೇಶ್ವರರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂ ಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಾಗಿ ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಶಾಸಕ ಡಾ. ಅಜಯಸಿಂಗ್, ಶಿವಯೋಗಿ ಸಿದ್ಧರಾಮೇಶ್ವರರು ಜನ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಸಮಾಜ ಮುಖಿ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪಗಳಾಗಿವೆ. ಭೋವಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

‘ಭೋವಿ ಸಮಾಜದ ಬಂಧುಗಳು ಕಾಯಕ ಜೀವಿಗಳಾಗಿದ್ದಾರೆ. ಮುಂಬ ರುವ ದಿನಗಳಲ್ಲಿ ಸಮುದಾಯ ಭವನ ನಿರ್ಮಿಸುವದಾಗಿ ಶಾಸಕರು ಭರವಸೆ ನೀಡಿದರು.

ಸೊನ್ನ ವಿರಕ್ತಮಠದ ಡಾ. ಶಿವಾನಂದ ಸ್ವಾಮೀಜಿ, ಯಲಗೋಡದ ಗುರುಲಿಂಗ ಸ್ವಾಮೀಜಿ, ಚಿಗರಳ್ಳಿಯ ಸಿದ್ದಬಸವ ಕಬೀರ ಸ್ವಾಮೀಜಿ, ರಾಜಶೇಖರ ಸೀರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ, ಸೋಮಯ್ಯ ನೇದಲಗಿ, ಗಂಗಯ್ಯಾ ಗುತ್ತೇದಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶರಣು ಗುತ್ತೇದಾರ, ಭೀಮಾಶಂಕರ ಕುರಡೇಕರ್, ಶಿವಕುಮಾರ ಗುತ್ತೇದಾರ, ಜಯಂ ತ್ಯುತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ಗುತ್ತೇದಾರ, ಜಿ.ಪಂ ಮಾಜಿ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ಪುರಸಭೆ ಅಧ್ಯಕ್ಷೆ ಗಂಗೂಬಾಯಿ ಮಂದರವಾಡ, ಮುಖಂಡರಾದ ಚಂದ್ರಶೇಖರ ಹರನಾಳ, ಜಯಪ್ರಕಾಶ ಪಾಟೀಲ ನರಿಬೋಳ, ಭೀಮಯ್ಯ ಗುತ್ತೇದಾರ, ಗುಂಡು ಗುತ್ತೇದಾರ, ಕಾಸೀಂ ಪಟೇಲ್ ಮುದವಾಳ, ಮುನ್ನಾಪಟೇಲ್ ಯಾಳವಾರ, ಸುಭಾಷ ಚನ್ನೂರ, ಭೀಮರಾಯ ನಗನೂರ, ಭೀಮಾಶಂಕರ ಯಲಗೋಡ, ಮಲ್ಲಣ್ಣ ಕೊಡಚಿ, ರಹಿಮಾನ್ ಪಟೇಲ್, ಪ್ರಭು ಜಾಧವ್, ತುಳಜಾರಾಮ ರಾಠೋಡ ಸೇರಿದಂತೆ ಸಹಸ್ರಾರು ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುಂಚೆ ಪಟ್ಟಣದ ಗುರುಕುಲಶಾಲೆ ಆವರಣದಿಂದ ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದ ವೇದಿಕೆವರೆಗೆ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು. ನೂರಾರು ಜನ ಮಹಿಳೆಯರು ಸಿದ್ಧರಾಮೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಕುಂಭ, ಕಳಸ ಹೊತ್ತು ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.