ADVERTISEMENT

ಬೆಂಗಳೂರಲ್ಲಿ ಕಲ್ಯಾಣ ಕರ್ನಾಟಕದ ಮಕ್ಕಳಿಗೆ ಹಾಸ್ಟೆಲ್‌ ನಿರ್ಮಿಸಲು ನಿವೇಶನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 4:29 IST
Last Updated 17 ಸೆಪ್ಟೆಂಬರ್ 2020, 4:29 IST
ಕಲಬುರ್ಗಿಯಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಲಬುರ್ಗಿಯಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಕಲಬುರ್ಗಿ: ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ3237 ಚದರ ಅಡಿ ನಿವೇಶವನ್ನು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಿದೆ.

ಇದರ ಆದೇಶ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಹಸ್ತಾಂತರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಶೇ 3ರಷ್ಟು ಮುಖ್ಯಮಂತ್ರಿ ಅವರ ವಿವೇಚನಾ ನಿಧಿ ಎಂದು ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಹಾಸ್ಟೆಲ್‌ ನಿರ್ಮಿಸಲು ಉದ್ದೇಶಿಸಲಾಗಿದೆ.

ADVERTISEMENT

ಈ ಭಾಗದ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಈ ಹಾಸ್ಟೆಲ್‌ ನಿರ್ಮಿಸಲು ಉದ್ದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.