ADVERTISEMENT

ಕ್ವಾರಂಟೈನ್‌ ಕೇಂದ್ರದಲ್ಲಿದ್ದ ವ್ಯಕ್ತಿಗೆ ಹಾವು ಕಡಿತ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 13:47 IST
Last Updated 10 ಜೂನ್ 2020, 13:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಆಳಂದ: ತಾಲ್ಲೂಕಿನ ಹಿತ್ತಲ ಶಿರೂರು ಗ್ರಾಮದ ಕ್ವಾರಂಟೈನ್‌ ಕೇಂದ್ರದಲ್ಲಿದ್ದಲಕ್ಷ್ಮಿಕಾಂತ ಬಾಬು ಎಂಬುವವರಿಗೆ ಮಂಗಳವಾರ ಹಾವು ಕಚ್ಚಿದ್ದು, ತಕ್ಷಣ ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿತ್ತಲ ಶಿರೂರು ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಕುಡಕಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮಿಕಾಂತ ಮುಂಬೈನಿಂದ ವಾಪಸಾಗಿ 12 ದಿನಗಳಿಂದ ಕ್ವಾರಂಟೈನ್‌ ಕೇಂದ್ರದಲ್ಲಿದ್ದರು. ಚಿಕಿತ್ಸೆ ನಂತರ ಮನೆಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT