ಜೇವರ್ಗಿ: ತಾಲ್ಲೂಕಿನ ಸೊನ್ನ ಗ್ರಾಮದ ರೈತ ಕರೆಪ್ಪ ಶಿವಲಿಂಗಪ್ಪ ಮಿಣಜಗಿ ಅವರು ಸಾಲಬಾಧೆ ತಾಳದೇ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ನೆಲೋಗಿಯ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ನಲ್ಲಿ ₹ 1 ಲಕ್ಷ, ಸೊನ್ನ ಸೊಸೈಟಿಯಲ್ಲಿ ₹ 50 ಸಾವಿರ ಹಾಗೂ ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಆದರೆ ಬೆಳೆ ಕೈ ಕೊಟ್ಟಿದ್ದರಿಂದ ಹಾಗೂ ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಮನನೊಂದು ಗುರುವಾರ ಬೆಳಿಗ್ಗೆ ತಮ್ಮ ಸ್ವಂತ ಹೊಲದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪತ್ನಿ ರೇಣುಕಾ ನೀಡಿದ ದೂರಿನನ್ವಯ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.