ADVERTISEMENT

ದಕ್ಷಿಣ ಪೂರ್ವ ವಲಯ ಯುವಜನೋತ್ಸವ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 19:42 IST
Last Updated 25 ಜನವರಿ 2023, 19:42 IST
ಹಾಲಪ್ಪ ಆಚಾರ್‌
ಹಾಲಪ್ಪ ಆಚಾರ್‌   

ಕಲಬುರಗಿ: ‘ಭಾರತೀಯ ವಿಶ್ವವಿದ್ಯಾಲಯಗಳ ಸಂಘದ (ಎಐಯು) ಸಹಯೋಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಜನವರಿ 27ರಿಂದ 31ರವರೆಗೆ 36ನೇ ಅಂತರ್ ವಿಶ್ವವಿದ್ಯಾಲಯ ದಕ್ಷಿಣ ಪೂರ್ವ ವಲಯ ಯುವಜನೋತ್ಸವ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ತಿಳಿಸಿದರು.

‘ಕರ್ನಾಟಕ, ತೆಲಂಗಾಣ ಮತ್ತು ಛತ್ತೀಸಗಡ ರಾಜ್ಯಗಳ 50 ವಿಶ್ವವಿದ್ಯಾಲಯಗಳ 1,200 ವಿದ್ಯಾರ್ಥಿಗಳು 27 ಸ್ಪರ್ಧೆಗಳಲ್ಲಿ ಭಾಗವಹಿಸುವರು. ಐದು ದಿನ ನಡೆಯುವ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳು, ಫೆಬ್ರುವರಿ 24ರಂದು ಬೆಂಗಳೂರಿನ ಜೈನ್‌ ವಿಶ್ವವಿದ್ಯಾಲಯದಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುವರು’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜನವರಿ 27ರ ಮಧ್ಯಾಹ್ನ 2.30ಕ್ಕೆ ಮೆರವಣಿಗೆ ಜರುಗಲಿದೆ. ಸಂಜೆ 4ಕ್ಕೆ ಕರ್ನಾಟಕ ಅಕ್ಕಮಹದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲಾ ಅವರು ಯುವಜನೋತ್ಸವ ಉದ್ಘಾಟಿಸುವರು. ಜ. 31ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಗಳ ಕುಲಪತಿ ಪ್ರೊ. ನಾಗೇಶ್ ವಿ.ಬೆಟ್ಟಕೋಟೆ, ನಟ ಸಂಪತ್ ಮೈತ್ರೇಯ, ಎಐಯು ಮಹಾ ಕಾರ್ಯದರ್ಶಿ ಡಾ.ಪಂಕಜ್ ಮಿತ್ತಲ್ ಭಾಗವಹಿಸುವರು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.