ADVERTISEMENT

ಅ 22, 29ರಂದು ಬೆಂಗಳೂರು–ಕಲಬುರಗಿ ಮಧ್ಯೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 6:28 IST
Last Updated 20 ಅಕ್ಟೋಬರ್ 2022, 6:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕಲಬುರಗಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣಿ ನಿವಾರಿಸಲು ನೈರುತ್ಯ ರೈಲ್ವೆಯು ಅ 22 ಹಾಗೂ ಅ 29ರಂದು ಬೆಂಗಳೂರು–ಕಲಬುರಗಿ ಮಧ್ಯೆ ವಿಶೇಷ (06557–06558) ರೈಲನ್ನು ಓಡಿಸಲಿದೆ.

22 ಹಾಗೂ 29ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡುವ ರೈಲು ಬೆಂಗಳೂರು ಕಂಟೋನ್ಮೆಂಟ್, ಯಲಹಂಕ, ಹಿಂದುಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ ಮೂಲಕ ರಾತ್ರಿ 11ಕ್ಕೆ ಕಲಬುರಗಿ ತಲುಪಲಿದೆ.

ಅಂದು ರಾತ್ರಿ 11.30ಕ್ಕೆ ಕಲಬುರಗಿಯಿಂದ ಹೊರಡುವ ರೈಲು ಇದೇ ಮಾರ್ಗವಾಗಿ ಬೆಳಿಗ್ಗೆ 11ಕ್ಕೆ ಬೆಂಗಳೂರು ತಲುಪಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.