ADVERTISEMENT

‘ಕೆಕೆಆರ್‌ಡಿಬಿ ಕಾಮಗಾರಿಗಳಿಗೆ ವೇಗ ನೀಡಿ: ದತ್ತಾತ್ರೇಯ ಪಾಟೀಲ ರೇವೂರ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 3:56 IST
Last Updated 23 ಜೂನ್ 2021, 3:56 IST

ಕಲಬುರ್ಗಿ: ‘ಈಗ ಲಾಕ್‌ಡೌನ್‌ ಸಡಿಲಗೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಚುರುಕುಗೊಳಿಸಬೇಕು’ ಎಂದು ಮಂಡಳಿಯ ಅಧ್ಯಕ್ಷದತ್ತಾತ್ರೇಯ ಪಾಟೀಲ ರೇವೂರ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಡಳಿ ವ್ಯಾಪ್ತಿಯ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಸಲ್ಲಿಕೆ, ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿ ಕುರಿತು ಅವರು ಮಂಗಳವಾರ ವರ್ಚುವಲ್‌ ಸಭೆಯಲ್ಲಿ ಚರ್ಚಿಸಿದರು.

‘ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಬೇಕು. ಕೋವಿಡ್ ಲಾಕ್‌ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ
ಸೂಚಿಸಿದರು.

ADVERTISEMENT

ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ, ವಿವಿಧ ಜಿಲ್ಲಾಧಿಕಾರಿಗಳು ಮತ್ತು ಮಂಡಳಿಯ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.