ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯ: ಮಹಿಳಾ ಕ್ರೀಡಾಕೂಟ ನಾಳೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 4:14 IST
Last Updated 29 ಡಿಸೆಂಬರ್ 2021, 4:14 IST
ಕಲಬುರಗಿ ನಗರದ ದೊಡ್ಡಪ್ಪ ಅಪ್ಪ ವಸತಿ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ನಡೆದ ರೈತ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಕಲಬುರಗಿ ನಗರದ ದೊಡ್ಡಪ್ಪ ಅಪ್ಪ ವಸತಿ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ನಡೆದ ರೈತ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ 40ನೇ ಅಂತರ ಮಹಾವಿದ್ಯಾಲಯಗಳ ಮಹಿಳಾ ಕ್ರೀಡಾಕೂಟ ಗುರುವಾರ (ಡಿ.30) ಬೆಳಿಗ್ಗೆ 9ಕ್ಕೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅವರು ಕ್ರೀಡಾಕೂಟ ಉದ್ಘಾಟಿಸುವರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ ಬಿ.ಯಾದವಾಡ ಮತ್ತು ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಬಿ.ಎಂ.ಕನಹಳ್ಳಿ ಅವರು ಅತಿಥಿಗಳಾಗಿ ಭಾಗವಹಿಸುವರು.

ಕ್ರೀಡಾಕೂಟದಲ್ಲಿ 200 ಮಹಿಳಾ ಕ್ರೀಡಾಪಟುಗಳು ಮತ್ತು 75 ಕ್ರೀಡಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.