ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕನ್ನಡದಲ್ಲಿ ಅಧಿಕ ಅಂಕ; ‘ಗುಣಾಗ್ರಣಿ ಪ್ರಶಸ್ತಿ’ ಪುಳಕ

​ಪ್ರಜಾವಾಣಿ ವಾರ್ತೆ
Published 25 ಮೇ 2025, 15:04 IST
Last Updated 25 ಮೇ 2025, 15:04 IST
ಕಲಬುರಗಿಯ ಕನ್ನಡ ಭವನದಲ್ಲಿ ಭಾನುವಾರ ಎಸ್ಎಸ್‌ಎಲ್‌ಸಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ‘ಹತ್ತರ ಕನ್ನಡಕೆ… ಗುಣಾಗ್ರಣಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಶಶೀಲ್‌ ನಮೋಶಿ, ಡಿಡಿಪಿಐ ಸೂರ್ಯಕಾಂತ ಮದಾನೆ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು 
–ಪ್ರಜಾವಾಣಿ ಚಿತ್ರ
ಕಲಬುರಗಿಯ ಕನ್ನಡ ಭವನದಲ್ಲಿ ಭಾನುವಾರ ಎಸ್ಎಸ್‌ಎಲ್‌ಸಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ‘ಹತ್ತರ ಕನ್ನಡಕೆ… ಗುಣಾಗ್ರಣಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಶಶೀಲ್‌ ನಮೋಶಿ, ಡಿಡಿಪಿಐ ಸೂರ್ಯಕಾಂತ ಮದಾನೆ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು  –ಪ್ರಜಾವಾಣಿ ಚಿತ್ರ   

ಕಲಬುರಗಿ: ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಕುಸಿದಿದ್ದರೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಅದರ ಸುಧಾರಣೆಗಾಗಿ ಕಾಲಮಿತಿ ಯೋಜನೆ ರೂಪಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಹತ್ತನೇ ತರಗತಿಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಹತ್ತರ ಕನ್ನಡಕೆ… ಗುಣಾಗ್ರಣಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ನಿರಂತರ ಓದುವ, ಬರೆಯುವ ಆಸಕ್ತಿ ಬೆಳೆಸಿಕೊಳ್ಳಬೇಕು. ಈ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಮುಂದಾಗಬೇಕು. ಅದರೊಂದಿಗೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರವೇ ನೇಮಕಾತಿ ನಡೆಸಬೇಕು. ಆಗ ಮಾತ್ರ ಫಲಿತಾಂಶ ಸುಧಾರಣೆಯಾಗಲು ಸಾಧ್ಯ’ ಎಂದರು.

ADVERTISEMENT

‘ಕನ್ನಡ ಭವನ ಆವರಣದ ಸಾಹಿತ್ಯ ಮಂಟಪದಲ್ಲಿ ಸುಸಜ್ಜಿತ ಶೆಡ್ ನಿರ್ಮಾಣಕ್ಕೆ ₹ 5 ಲಕ್ಷ ಅನುದಾನ ಶೀಘ್ರವೇ ಮಂಜೂರು ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ‘ಶಿಕ್ಷಕರು ಮಕ್ಕಳಿಗೆ ಕೇವಲ ಹೆಚ್ಚು ಅಂಕ ಗಳಿಸುವಂತೆ ಶಿಕ್ಷಣ ನೀಡಿದರೆ ಸಾಲದು. ಗುಣಮಟ್ಟದ ಶಿಕ್ಷಣದ ಜತೆಗೆ ತಂದೆ–ತಾಯಿ ಹಾಗೂ ಗುರು–ಹಿರಿಯರನ್ನು ಗೌರವಿಸುವ, ಮಾನವೀಯ ಮೌಲ್ಯಗಳು, ದೇಶಭಕ್ತಿ ಕಲಿಸುವ ಅಗತ್ಯವಿದೆ’ ಎಂದರು.

ಡಿಡಿಪಿಐ ಸೂರ್ಯಕಾಂತ ಮದಾನೆ ಮಾತನಾಡಿದರು.

ಜಿಲ್ಲಾ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಕಲ್ಯಾಣ ಕರ್ನಾಟಕದ ನೌಕರರ ಸಂಘದ ಅಧ್ಯಕ್ಷ ಮಹೇಶಕುಮಾರ ಹೆಬ್ಬಾಳೆ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.