ADVERTISEMENT

ಎಸ್ಸೆಸ್ಸೆಲ್ಸಿ: ಜಿಲ್ಲೆಗೆ ಪ್ರಥಮ ಬಂದ ಮಹಾದೇವಪ್ಪಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 7:43 IST
Last Updated 12 ಆಗಸ್ಟ್ 2021, 7:43 IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಲಬುರ್ಗಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಫಜಲಪುರ ತಾಲ್ಲೂಕಿನ ಕೊಗನೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಮಹಾದೇವಪ್ಪ ಸಾತಲಿಂಗಪ್ಪ ಕುಂಬಾರ (621) ಅವರನ್ನು ರಮೇಶ ಜಿ. ಸಂಗಾ ಬುಧವಾರ ಸನ್ಮಾನಿಸಿದರು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಲಬುರ್ಗಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಫಜಲಪುರ ತಾಲ್ಲೂಕಿನ ಕೊಗನೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಮಹಾದೇವಪ್ಪ ಸಾತಲಿಂಗಪ್ಪ ಕುಂಬಾರ (621) ಅವರನ್ನು ರಮೇಶ ಜಿ. ಸಂಗಾ ಬುಧವಾರ ಸನ್ಮಾನಿಸಿದರು   

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ಕೊಗನೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಮಹಾದೇವಪ್ಪ ಸಾತಲಿಂಗಪ್ಪ ಕುಂಬಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 (ಶೇ. 99.36) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ ಜಿ. ಸಂಗಾ ಅವರು ಬುಧವಾರ ವಿದ್ಯಾರ್ಥಿ ವೈಯ್ಯಕ್ತಿಕವಾಗಿ ₹ 5 ಸಾವಿರ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು.

ಅದೇ ರೀತಿ ಈ ಶಾಲೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ 34 ವಿದ್ಯಾರ್ಥಿಗಳು 125ಕ್ಕೆ 125 ಅಂಕಗಳನ್ನು ಪಡೆದಿದ್ದಕ್ಕಾಗಿ ಶಾಲೆಯ ಕನ್ನಡ ಶಿಕ್ಷಕ ಸತೀಶ ಜಮಾದಾರ ಅವರನ್ನು ಸಹ ಸನ್ಮಾನಿಸಲಾಯಿತು.

ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಒಟ್ಟು 7 ವಸತಿ ಶಾಲೆಗಳ 334 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 260 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 74 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ.

ADVERTISEMENT

ರೇವಗ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಇಬ್ಬರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಳಮಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 47 ವಿದ್ಯಾರ್ಥಿಗಳ ಪೈಕಿ 45 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಇಬ್ಬರು ವಿದ್ಯಾರ್ಥಿಗಳು ಪ್ರಥಮ ದರ್ಜೆ,ಹೆಬ್ಬಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 50 ವಿದ್ಯಾರ್ಥಿಗಳು ಪೈಕಿ 40 ಡಿಸ್ಟಿಂಕ್ಷನ್ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.

ಅದೇ ರೀತಿಕೋಗನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 49 ವಿದ್ಯಾರ್ಥಿಗಳ ಪೈಕಿ 38 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ತಡಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 44 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 49 ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು 47 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಜಿಲ್ಲಾ ಸಮನ್ವಯಾಧಿಕಾರಿ ಶಿವರಾಮ ಚವ್ಹಾಣ, ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ಶಿವಪುತ್ರಪ್ಪ ಕಕ್ಕಳಮೇಲಿ, ನಾವೀದ್ ಅಂಜುಂ, ಅಣವೀರಪ್ಪ ಹರಸೂರ, ಮಲ್ಲಿಕಾರ್ಜುನ ಬಿರಾದಾರ, ಜ್ಯೋತಿ ಕರಕಳಿ, ಶ್ರೀನಾಥ ಕಣ್ಣಿ, ಶರಣಬಸಪ್ಪ ಮಾಗಶೆಟ್ಟಿ, ಮಲಕಪ್ಪ ಜಿ. ಬಿರಾದರ, ಪತ್ರಾಂಕಿತ ವ್ಯವಸ್ಥಾಪಕ ಸದಾಶಿವ ನಾರಾಯಣಕರ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.