ಕಲಬುರ್ಗಿ: ಕಳೆದ ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಕೂಡಿ ಬಂದಿದ್ದು, ಸೆಪ್ಟೆಂಬರ್ 3ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ.
ಪಾಲಿಕೆಯ 55 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ.
ಆ.16 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23 ನಾಮಪತ್ರ ಸಲ್ಲಿಸಲು ಕೊನೆಯ ದಿನ.
ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆ 3ರಂದು ಮತದಾನ ನಡೆಯಲಿದೆ.
ವಾರ್ಡ್‌ಗಳ ಮೀಸಲಾತಿ ಹಂಚಿಕೆಯನ್ನು ಪ್ರಶ್ನಿಸಿ ಪಾಲಿಕೆ ಮಾಜಿ ಸದಸ್ಯರೊಬ್ಬರು ಹೈಕೋರ್ಟ್ ಮೆಟ್ಟಿಲು ಏರಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು. ಇತ್ತೀಚೆಗೆ ಪ್ರಕರಣ ಇತ್ಯರ್ಥಗೊಂಡು, ಮತದಾರರ ಪಟ್ಟಿ ಪರಿಷ್ಕರಣೆಯೂ ನಡೆದಿತ್ತು.
ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಹಾಗೂ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಐಎಂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.