ಕಲಬುರ್ಗಿ: ಕಳೆದ ಗುರುವಾರ ಮ್ಯಾನ್ ಹೋಲ್‌ನಲ್ಲಿ ಬಿದ್ದು ಮೃತಪಟ್ಟ ಪೌರ ಕಾರ್ಮಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಅವರು ಶನಿವಾರ ಕೈಲಾಸ ನಗರದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರಿಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹೀರಾಮನಿ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಗೀತಾ ವಾಡೇಕರ್, ನಾಗರಾಜ ಎಸ್. ಎಂ.ವಿ.ವೆಂಕಟೇಶ, ಕರ್ನಾಟಕ ಉಚ್ಛ ನ್ಯಾಯಾಲಯದ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ನ್ಯಾಯವಾದಿ ಎಚ್.ವೆಂಕಟೇಶ ದೊಡ್ಡೇರಿ, ಮಹಾನಗರ ಪಾಲಿಕೆಯ ಅಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಕಲಬುರಗಿ ವಲಯದ ಮುಖ್ಯ ಎಂಜಿನೀಯರ್ ದಿನೇಶ ಎಸ್.ಎನ್., ಅಧೀಕ್ಷಕ ಎಂಜಿನೀಯರ್ ಬಸವರಾಜ ಅಲೇಗಾಂವ, ಕಾರ್ಯನಿರ್ವಾಹಕ ಎಂಜಿನೀಯರ್ ನರಸಿಂಹರೆಡ್ಡಿ , ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.