ADVERTISEMENT

ಲಂಚಕ್ಕೆ ಬೇಡಿಕೆ ಇಟ್ಟರೆ ಕಠಿಣ ಕ್ರಮ: ಪ್ರದೀಪ ಕೊಳ್ಳ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 5:47 IST
Last Updated 16 ಫೆಬ್ರುವರಿ 2022, 5:47 IST
ಚಿತ್ತಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಿಂದ ಆಯೋಜಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪ್ರದೀಪ ಕೊಳ್ಳ ಮಾತನಾಡಿದರು
ಚಿತ್ತಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಿಂದ ಆಯೋಜಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪ್ರದೀಪ ಕೊಳ್ಳ ಮಾತನಾಡಿದರು   

ಚಿತ್ತಾಪುರ: 'ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಸಾರ್ವಜನಿಕರ ಕೆಲಸಕ್ಕೆ ಲಂಚಕ್ಕಾಗಿ ಬೇಡಿಕೆ ಇಡಬಾರದು. ಯಾವುದೇ ರೀತಿಯ ಆಮೀಷಕ್ಕೆ ಒಳಗಾಗಬಾರದು’ ಎಂದು ಕಲಬುರಗಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್‌ಪೆಕ್ಟರ್
ಪ್ರದೀಪ ಕೊಳ್ಳ ಎಚ್ಚರಿಸಿದರು.

ಸ್ಥಳೀಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯಿಂದ ಆಯೋಜಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.

ಹಣಕ್ಕಾಗಿ ಬೇಡಿಕೆ ಇಟ್ಟು ಕೆಲಸ ಮಾಡಿಕೊಡುವುದನ್ನು ತಡ ಮಾಡಿದರೆ ಕೆಲಸ ಸಕಾಲ ಯೋಜನೆ ಜಾರಿಗೆ ಇರುವಾಗಲೂ ಪೆಂಡಿಂಗ್ ಇಟ್ಟರೆ ನಿಮಗೆ ತೊಂದರೆ ತಪ್ಪಿದ್ದಲ್ಲ. ಕಾರಣವಿಲ್ಲದೆ ಕೆಲಸದ ಅರ್ಜಿಗಳನ್ನು ವಿಲೇವಾರಿ ಬಾಕಿ ಉಳಿಸುವಂತ್ತಿಲ್ಲ. ಕೆಲಸ ಮಾಡಿಕೊಡಲು ಹಣದ ಬೇಡಿಕೆ ಇಟ್ಟರೆ ಆಡಿಯೋ ಸಮೇತ ದೂರು ಸಲ್ಲಿಸಿದರೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ.

ADVERTISEMENT

ಬಾಕಿ ಉಳಿದ ಕೆಲಸ ತಕ್ಷಣ ಮಾಡಿಸಿಕೊಡುತ್ತೇವೆ’ ಎಂದು ಅವರು ತಿಳಿಸಿದರು.

ಚಿತ್ತಾಪುರ ಪೊಲೀಸ್ ಠಾಣೆಯ ಪಿಎಸ್ಐ ಎ.ಎಸ್ ಪಟೇಲ್ ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಸರ್ಕಾರಿ ನೌಕರರು
ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.