
ಪ್ರಾತಿನಿಧಿಕ ಚಿತ್ರ
ಅಫಜಲಪುರ (ಕಲಬುರಗಿ): ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ, ಇಲ್ಲಿನ ಪಿಯು ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರನನ್ನು ಅಫಜಲಪುರ ಠಾಣೆ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಉಪನ್ಯಾಸಕನ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧಿಸುವವರೆಗೂ ತರಗತಿಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದು ಪೋಷಕರು ಹಾಗೂ ಸಾರ್ವಜನಿಕರು ಕಾಲೇಜಿನ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.
‘ಪ್ರತಿಭಟನೆ ಹಿಂದೆಯೇ ಉಪನ್ಯಾಸಕ ಪರಾರಿಯಾಗಿದ್ದ. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಕೆಲವೇ ಗಂಟೆಗಳಲ್ಲಿ ಉಪನ್ಯಾಸಕನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
ದೂರು ನೀಡಿದ ವಿದ್ಯಾರ್ಥಿನಿ ಅಷ್ಟೇ ಅಲ್ಲದೇ ಇತರೆ ವಿದ್ಯಾರ್ಥಿನಿಯರಿಗೂ ಉಪನ್ಯಾಸಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.