ADVERTISEMENT

ಕೆ ಸೆಟ್: ‘ನೇಮಕಾತಿ ಪರೀಕ್ಷೆ ಬರೆಯಲು ಅವಕಾಶ ನೀಡಿ’

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 5:14 IST
Last Updated 11 ನವೆಂಬರ್ 2021, 5:14 IST
ಗುಲಬರ್ಗಾ ವಿ.ವಿ. ಸ್ನಾತಕೋತ್ತರ ಕೋರ್ಸುಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಬೇಕು ಎಂದು ಒತ್ತಯಿಸಿ ವಿದ್ಯಾರ್ಥಿಗಳು ಮೌಲ್ಯಮಾಪನ ಕುಲಸಚಿವ ಪ್ರೊ. ಸೋನರ ನಂದಪ್ಪ ಅವರಿಗೆ ಮನವಿ ಸಲ್ಲಿಸಿದರು
ಗುಲಬರ್ಗಾ ವಿ.ವಿ. ಸ್ನಾತಕೋತ್ತರ ಕೋರ್ಸುಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಬೇಕು ಎಂದು ಒತ್ತಯಿಸಿ ವಿದ್ಯಾರ್ಥಿಗಳು ಮೌಲ್ಯಮಾಪನ ಕುಲಸಚಿವ ಪ್ರೊ. ಸೋನರ ನಂದಪ್ಪ ಅವರಿಗೆ ಮನವಿ ಸಲ್ಲಿಸಿದರು   

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಇನ್ನೂ ಬಂದಿಲ್ಲ. ಆದರೆ ಕೆ ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ವಿ.ವಿ. ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

‘ಏಳು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಕೊರೊನಾ ಪ್ರಯುಕ್ತ ವಿ.ವಿ. ಪರೀಕ್ಷೆಗಳು ತಡವಾಗಿ ನಡೆದಿದ್ದು, ಫಲಿತಾಂಶವೂ ವಿಳಂಬವಾಗಿ ಬರುವ ಸಾಧ್ಯತೆ ಇದೆ. ಹೀಗಾಗಿ, ನೇಮಕಾತಿ ಪರೀಕ್ಷೆಗೆ ಅವಕಾಶ ನೀಡಬೇಕು. 2019ರಲ್ಲಿ ಬಿ.ಇಡಿ. ಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಈಗಲೂ ಉನ್ನತ ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು‘ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

‘ಫಲಿತಾಂಶವನ್ನು ಆದ್ಯತೆಯ ಮೇರೆಗೆ ತಕ್ಷಣ ಪ್ರಕಟಿಸಬೇಕು’ ಎಂದು ಕೋರಿ ಗುಲಬರ್ಗಾ ವಿ.ವಿ. ಮೌಲ್ಯಮಾಪನ ವಿಭಾಗದ ಕುಲಸಚಿವ ಸೋನರ ನಂದಪ್ಪ ಡಿ. ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ವಿದ್ಯಾರ್ಥಿಗಳಾದ ಹಣಮಂತ ಎಸ್. ಪಗಡೆ, ಶ್ರೀಶೈಲ ಪೂಜಾರಿ, ಶಿವಾಜಿ, ಹೊನ್ನಪ್ಪ, ಗೋಪಾಲಕೃಷ್ಣ, ಸುಭಾಷ್, ಸೋಮಣ್ಣ ಎಸ್, ರಮೇಶ, ರಾಯಪ್ಪ, ಪ್ರಕಾಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.