
ಕಲಬುರಗಿ: ಜಿಲ್ಲೆಯ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹3500 ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘ ಗುರುವಾರ ಕರೆ ನೀಡಿದ್ದ ‘ಅಫಜಲಪುರ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಂದ್ ಅಂಗವಾಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಕಲಬುರಗಿ–ಸೋಲಾಪುರ, ವಿಜಯಪುರ–ಘತ್ತರಗಿ ಗ್ರಾಮಗಳಿಗೆ ಸಂಚರಿಸುವ ಜನರಿಗೆ ಮತ್ತು ವಾಹನ ಸವರಾರರಿಗೆ ತೊಂದರೆಯಾಗಿತ್ತು. ಗುರುವಾರ ತಾಲ್ಲೂಕಿನ ದೇವಲ ಗಾಣಗಾಪುರದಲ್ಲಿ ಕಾರ್ತಿಕ ಮಹೋತ್ಸವ ಹಾಗೂ ವನಭೋಜನ ಕಾರ್ಯಕ್ರಮ ಇದ್ದುದರಿಂದ ಮಹಾರಾಷ್ಟ್ರದಿಂದ ಬಂದಿದ್ದ ಯಾತ್ರಿಕರು ಪರದಾಡಿದರು.
ಪ್ರತಿಭಟನಕಾರರು ಹಲಿಗೆ ಬಡಿಯುತ್ತಾ ಮಾರ್ಕೆಟ್‌ನ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದ್ದರು. ಹೀಗಾಗಿ ಪಟ್ಟಣದಲ್ಲಿ ಎಲ್ಲ ಕಡೆಗೂ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು.
ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸಿ ಜಿಲ್ಲೆಯ ಚಿಂಚೋಳಿಯಲ್ಲಿ ಭಾರತೀಯ ಕಿಸಾನ್ ಮೋರ್ಚಾ ಕಾರ್ಯಕರ್ತರು ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.