ADVERTISEMENT

ಕಲಬುರಗಿ: ಐವರು ವಿದ್ಯಾರ್ಥಿನಿಯರಿಗೆ ಶಿಷ್ಯವೇತನ

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:38 IST
Last Updated 22 ಮೇ 2025, 13:38 IST
ವೈಷ್ಣವಿ ಟಕ್ಲೆ
ವೈಷ್ಣವಿ ಟಕ್ಲೆ   

ಕಲಬುರಗಿ: ಸಿಂಗಾಪುರ ಮೂಲದ ಕ್ವೆಸ್ಟ್ ಗ್ಲೋಬಲ್ ಸಾಫ್ಟ್‌ವೇರ್‌ ಕಂಪನಿಯು ಸಿಎಸ್‌ಆರ್‌ ಅಡಿಯಲ್ಲಿ 2024–25ನೇ ಶೈಕ್ಷಣಿಕ ವರ್ಷಕ್ಕೆ ನೀಡುವ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ (ಐಇಇಇ) ವುಮನ್ ಇನ್ ಎಂಜಿನಿಯರಿಂಗ್ (ಡಬ್ಲ್ಯುಐಇ) ವಿದ್ಯಾರ್ಥಿವೇತನಕ್ಕೆ ನಗರದ ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿ ವೇತನವು ತಲಾ ₹50 ಸಾವಿರ ಒಳಗೊಂಡಿದೆ.

ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿವೇತನ ಪಡೆಯಲು 388 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ ಈ ಐವರು ವಿದ್ಯಾರ್ಥಿಗಳು ಸೇರಿದ್ದಾರೆ. 2023-24ನೇ ಶೈಕ್ಷಣಿಕ ವರ್ಷದಲ್ಲಿ ಗೋದುತಾಯಿ ಮಹಿಳಾ ಎಂಜಿನಿಯರಿಂಗ್ ಕಾಲೇಜಿನ 11 ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಭಾಜನರಾಗಿದ್ದರು.

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದ ವೈಷ್ಣವಿ ಸೋಮ, ರಾಧಿಕಾ ಷಣ್ಮುಖ್ ಮತ್ತು ಮೊಹಮ್ಮದಿ ಮಹೀನ್‌ ನಾಜ್‌, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನ ವಿಭಾಗದ ಭೂಮಿಕಾ ರೆಡ್ಡಿ, ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ ವಿಭಾಗದ ವೈಷ್ಣವಿ ಟಕ್ಲೆ ಶಿಷ್ಯವೇತನಕ್ಕೆ ಭಾಜನರಾಗಿದ್ದಾರೆ ಎಂದು ಶರಣಬಸವ ವಿಶ್ವವಿದ್ಯಾಲಯದ ಡೀನ್ ಲಕ್ಷ್ಮಿ ಪಾಟೀಲ ಮಾಕಾ ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಸೇರಿದಂತೆ ಸಂಸ್ಥಾನದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭೂಮಿಕಾ ರೆಡ್ಡಿ
ಮೊಹಮ್ಮದಿ ಮಹೀನ್‌ ನಾಜ್‌
ರಾಧಿಕಾ ಷಣ್ಮುಖ
ವೈಷ್ಣವಿ ಸೋಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.